ಕೋಸ್ಟಲ್ ಟಾಕ್ ನ್ಯೂಸ್ | ಕಡಬ 

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ಅಪ್ರಾಪ್ತೆ ಬಾಲಕಿಯನ್ನು ಕೊಂಡೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ರವೀಂದ್ರ ಆಚಾರ್ಯ (32) ಎಂಬಾತನ ವಿರುದ್ಧ ಕಡಬ ಪೊಲೀಸ್ ಕಲಂ : 376(2)(i), 505 IPC ಮತ್ತು ಕಲಂ : 5(l), 6 POCSO Act -12 ರಂತೆ‌ ಪ್ರಕರಣ ದಾಖಲಾಗಿರುತ್ತದೆ. 

ಪ್ರಕರಣದ ತನಿಖೆ ನಡೆಸಿದ ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ  ನಿರೀಕ್ಷಕರಾಗಿದ್ದ ಡಿ. ಮಂಜುನಾಥ್ ರವರು ಆರೋಪಿ ಪುತ್ತೂರು ನೆಲ್ಯಾಡಿ ನಿವಾಸಿ ರವೀಂದ್ರ ಆಚಾರ್ಯ (32) ಎಂಬಾತನ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ. ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ. ಮಂಗಳೂರು (ಕಾರ್ಯ ನಿರ್ವಹಣೆ -ಪುತ್ತೂರು ) ಇಲ್ಲಿ ಪ್ರಕರಣದ‌ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸುಮಂಗಲ ರವರು, ಆರೋಪಿತನ ವಿರುದ್ಧದ ಆರೋಪಿಗಳು ಸಾಬೀತಾದ ಹಿನ್ನೆಲೆಯಲ್ಲಿ, 2012 ರ POCSO ಕಾಯ್ದೆಯ ಸೆಕ್ಷನ್ 6 ರೊಂದಿಗೆ ಓದಲಾದ ಸೆಕ್ಷನ್ 5(1) ರ ಅಡಿಯಲ್ಲಿ ಶಿಕ್ಷಾರ್ಹವಾದ ಅಪರಾಧಕ್ಕಾಗಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. 25,000/- ದಂಡ. ದಂಡ ಪಾವತಿಸಲು ವಿಫಲವಾದರೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆ, ಐ.ಪಿ.ಸಿ.ಯ ಸೆಕ್ಷನ್ 506 ರ ಅಡಿಯಲ್ಲಿ ಶಿಕ್ಷಾರ್ಹವಾದ ಅಪರಾಧಕ್ಕಾಗಿ ಒಂದು ವರ್ಷದ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 25,000/- ದಂಡ, ದಂಡವನ್ನು ಪಾವತಿಸಲು ವಿಫಲವಾದರೆ, ಒಂದು ವರ್ಷದ ಕಠಿಣ ಜೈಲು ಶಿಕ್ಷೆ (ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುವಂತೆ) ಅದೇಶಿಸಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡoತ್ಯಾಯ ರವರು ವಾದಮಂಡನೆ ನಡೆಸಿರುತ್ತಾರೆ.