ಕೋಸ್ಟಲ್ ಟಾಕ್ ನ್ಯೂಸ್ | ಬೆಂಗಳೂರು 

'ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ನಮ್ಮ ಸರ್ಕಾರ ಎರಡು‌ ಕಂತಿನಲ್ಲಿ 5,000 ರೂ. ಬಿಡುಗಡೆ ಮಾಡುತ್ತದೆ. ಮೊದಲನೆ ಕಂತಿನ ಹಣ ಈಗಾಗಲೇ ಅನೇಕ ರೈತರನ್ನು ತಲುಪಿದೆ.‌ ಪ್ರತಿ ರೈತರಿಗೆ ಹಣ ತಲುಪಿಸಲು ಸೂತ್ರ ರಚಿಸಿದೆ‌' ಎಂದು ಸಿಎಂ‌ ಡಿ ಕೆ‌ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. 

'ಪ್ರತಿ ರೈತರಿಗೂ ಒಂದು ನಿರ್ದಿಷ್ಟ ಮೊತ್ತವನ್ನು ನಿಗದಿಪಡಿಸಲಾಗಿದೆ. ​ಸರಿಯಾದ ಖಾತೆಗಳಿಗೆ ಹಣ ತಲುಪಿದೆ. ಆದರೆ ಹಣ ತಲುಪದ ರೈತರ ಖಾತೆಯಲ್ಲಿ ಇರುವ ಅಡತಡೆ ನಿವಾರಿಸಿ ಪಾವತಿಸಲಾಗುವುದು. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ‌' ಎಂದು ಸ್ಪಷ್ಟನೆ ನೀಡಿದರು. '​ಒಂದು ಪಕ್ಷ ರೈತರಿಗೆ ತಲುಪಬೇಕಾದ ಮೊತ್ತದಲ್ಲಿ  ಹೆಚ್ಚು-ಕಮ್ಮಿಯಾಗಿದ್ದರೆ ಅದನ್ನು ಸರಿಪಡಿಸಲಾಗುವುದು. ​ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೇ ಇದ್ದರೂ ನಮ್ಮ ಸರ್ಕಾರ ರೈತರಿಗೆ ನುಡಿದಂತೆ ಎರಡು ಕಂತುಗಳಲ್ಲಿ 5 ಸಾವಿರ ರೂ. ಪರಿಹಾರ ಪಾವತಿ ಮಾಡುತ್ತದೆ' ಎಂದು ಭರವಸೆ ನೀಡಿದರು.