ವಿಧಾನ ಪರಿಷತ್ ಪಶ್ಚಿಮ ಪಧವೀಧರರ ಕ್ಷೇತ್ರ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟ
ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಪಶ್ಚಿಮ ಪಧವೀಧರರ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗೆ ಸೆಪ್ಟಂಬರ್ 29 ರಂದು ಅಧಿಸೂಚನೆ ಹೊರಡಿಸಲಿದ್ದು, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ಚುನಾವಣಾಧಿಕಾರಿಯಾಗಿದ್ದು, ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ನಾಮಪತ್ರಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸ್ವೀಕರಿಸಲಿದ್ದು, ಕರ್ನಾಟಕ ಪಶ್ಚಿಮ ಪಧವೀಧರರ ಕ್ಷೇತ್ರದ ವ್ಯಾಪ್ತಿಯು ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳ ಒಳಗೊಂಡ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
ಚುನಾವಣೆಗೆ ಸೆ.29 ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಅ.6 ಕೊನೆಯ ದಿನವಾಗಿದ್ದು, ಅ.7 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದ್ದು, ಅಕ್ಟೋಬರ್ 23 ರಂದು ಬೆಳಗ್ಗೆ 8 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆಯಲಿದೆ.
ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು, ಉಮೇದುವಾರರು ಕರ್ನಾಟಕದ ಯಾವುದಾದರು ವಿಧಾನ ಸಭಾ ಕ್ಷೇತ್ರದ ಮತದಾರರಾಗಿರಬೇಕು, ಯಾವುದೇ ಕಾನೂನಿನಡಿ ಅನರ್ಹರಾಗಿರಬಾರದು, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ನೋಂದಾಯಿತರಾದ ಪದವೀಧರರು ಮಾತ್ರ ಮತದಾರರಾಗಿರುತ್ತಾರೆ. ದಿನಾಂಕ: 1-11-2025ರ ಅರ್ಹತಾ ದಿನಾಂಕದನ್ವಯ ಇಲ್ಲಿಯವರೆಗೆ ಒಟ್ಟು 90,460 ಮತದಾರರು ನೋಂದಾಯಿಸಿಕೊAಡಿರುತ್ತಾರೆ. ಭರ್ತಿ ಮಾಡಿದ ನಮೂನೆಗಳನ್ನು ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಧಾರವಾಡ ಇವರಿಗೆ ಉಮೇದುವಾರರೇ ಸ್ವತಃ ಅಥವಾ ಅವರ ಸೂಚಕರ ಮುಖೇನ ಸೆ.29 ರಿಂದ ಅ.6 ರವರೆಗೆ ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ, ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಸಬಹುದು. ಪ್ರಜಾ ಪ್ರತಿನಿಧಿ ಕಾಯ್ದೆ-1951 ರ ಕಲಂ-34ರ ಮೇರೆಗೆ ಸಾಮಾನ್ಯ ವರ್ಗದ ಉಮೇದುವಾರರು ರೂ.10 ಸಾವಿರ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಮೇದುವಾರರು ರೂ.5 ಸಾವಿರ ಠೇವಣಿಯನ್ನು ನಾಮಪತ್ರ ಸಲ್ಲಿಕೆ ಕಾಲಕ್ಕೆ ಠೇವಣಿ ಇಡಬೇಕಾಗುತ್ತದೆ. ಪ್ರಮಾಣ ಪತ್ರ ಮತ್ತು ನಮೂನೆ ಎಎ ಮತ್ತು ನಮೂನೆ ಬಿಬಿ ಗಳನ್ನು ನಾಮಪತ್ರದೊಂದಿಗೆ ಸಲ್ಲಿಸದೇ ಇದ್ದಲ್ಲಿ, ಅವುಗಳನ್ನು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಅ.6 ಮಧ್ಯಾಹ್ನ 3 ಗಂಟೆಯೊಳಗಾಗಿ ಸಲ್ಲಿಸತಕ್ಕದ್ದಾಗಿರುತ್ತದೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.